ಸೋಮವಾರ, ಜನವರಿ 19, 2009

ಓ ನನ್ನ ಬಡಕನ್ನಡವೇ..ನಿನಗೆಲ್ಲರಿಂದಲೂ ಸಂಕಟವೇ??


ಎಲ್ಲರಿಗೂ ಹೃತ್ಪೂರ್ವಕ ನಮಸ್ಕಾರ,
ಜನವರಿ ೨೬ ರ ಗಣರಾಜ್ಯೋತ್ಸವದ ಪ್ರಯುಕ್ತ ಎಲ್ಲ ಪ್ರಾಂತೀಯ ಭಾಷೆಗಳ ಪ್ರಾಮುಖ್ಯತೆಯನ್ನು ಮನಗಂಡು ಬರೆದ ಲೇಖನವಿದು.

ಮೊನ್ನೆ ಮೊನ್ನೆ ದೆಹಲಿಯಲ್ಲಿ ದುಂಡು ಮೇಜಿನ ಸಮ್ಮೇಳನವೊಂದನ್ನು ಆಯೋಜಿಸಲಾಗಿತ್ತು. ಅದರಲ್ಲಿ ಸಕ್ರಿಯಾವಾಗಿ ಪಾಲ್ಗೋಳ್ಳಲು ಭಾರತ ದೇಶದ ಎಲ್ಲಾ ಪ್ರಾದೇಶಿಕ ಸಮ್ಮೇಳನಕ್ಕೆ ತುಂಬು ಹೃದಯದಿಂದ ಆಹ್ವಾನಿಸಲಾಗಿತ್ತು. ಆಯಾ ರಾಜ್ಯಗಳಲ್ಲಿ, ಆಯಾ ಭಾಷೆಗಳು ಎದುರಿಸುತ್ತಿರುವ ಎಡರು, ತೊಡರುಗಳನ್ನು ಕುರಿತು ಚರ್ಚಿಸುವುದು ಹಾಗೂ ಭಾರತೀಯ ಭಾಷೆಗಳಲ್ಲೇ ಇರುವ ಒಳಜಗಳನ್ನು ಪರಿಣಾಮಕಾರಿಯಾಗಿ ಹೇಗೆ ನಿರ್ಮೂಲನೆ ಮಾಡುವುದು ಎನ್ನುವುದರ ಬಗ್ಗೆ ನಿರ್ಣಯ ಕೈಗೊಳ್ಳುವುದು, ಈ ಸಮ್ಮೇಳನದ ಮುಖ್ಯ ಉದ್ದೇಶವಾಗಿತ್ತು. ಹಿಂದಿ ಭಾಷೆಯು ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿಕೊಂಡಿತ್ತು.

ಸಮಯಕ್ಕೆ ಸರಿಯಾಗಿ ಸಮ್ಮೇಳನ ಶುರುವಾಯಿತು. ಒಂದೊಂದೇ ಭಾಷೆಗಳು ತಮ್ಮ, ತಮ್ಮ ರಾಜ್ಯಗಳಲ್ಲಿ ತಾವುಗಳು ಗಳಿಸಿಕೊಂಡಿರುವ ಹಿರಿಮೆ ಹಾಗೂ ತಾವುಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರವಾಗಿ ಹೇಳುತ್ತಾ ಬಂದವು. ಬಹುಮುಖ್ಯವಾಗಿ ಎಲ್ಲ ಭಾಷೆಗಳು ತೋಡಿಕೊಂಡಿದ್ದು ಒಂದೇ ಅಳಲು, ಅದು “ಇಂಗ್ಲೀಷ್ ಭಾಷೆಯು ತಮ್ಮ ನಾಡಿನ ಜನರ ಮೇಲೆ ಬೀರುತ್ತಿರುವ ಗಾಢ ಪ್ರಭಾವ ಹಾಗೂ ಅದರಿಂದ ತಮ್ಮ ಉಳಿವಿಗೆ ಬಂದಿರುವ ಆಪತ್ತು”.

ಉತ್ತರ ಭಾರತದ ಎಲ್ಲಾ ಭಾಷೆಗಳ ಸರದಿ ಮುಗಿಯುತ್ತಿದ್ದಂತೆಯೇ, ದಕ್ಷಿಣ ಭಾರತೀಯ ಭಾಷೆಗಳ ಸರದಿ ಬಂತು. ಅದರಲ್ಲಿ ಮೊದಲನೇ ಸರದಿ ಮಲೆಯಾಳಂ ಭಾಷೆಯದಾಗಿತ್ತು. ಸಮಾರಂಭಕ್ಕೆಂದು ಚೆನ್ನಾಗಿಯೇ ಪೂರ್ವ ತಯಾರಿ ಮಾಡಿಕೊಂಡು ಬಂದಿದ್ದ ಮಲೆಯಾಳಂ ಭಾಷೆಯು ಎಲ್ಲ ಭಾಷೆಗಳಿಗೂ ನಮಸ್ಕಾರ ಹೇಳುತ್ತಾ, ತನ್ನ ಮಾತನ್ನು ಮುಂದುವರೆಸಿತು, “ನಾನು ಬಳಸಲ್ಪಡುವ ಕೇರಳ ರಾಜ್ಯ ದಕ್ಷಿಣ ಭಾರತದ ರಾಜ್ಯಗಳಲ್ಲೇ ಬಹಳ ಚಿಕ್ಕದಿರುಬಹುದು. ಆದರೆ ನನ್ನ ಜನ ನನ್ನನ್ನು ಬಹಳ ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದಾರೆ, ಅಲ್ಲದೇ ಈ ಭೂಮಿಯ ಮೇಲಿರುವ ಪ್ರತಿಯೊಂದು ದೇಶಗಳಲ್ಲೂ ಮಲಯಾಳಂ ಜನರಿದ್ದಾರೆ. ಅವರುಗಳು ಅಲ್ಲಿ ಮಲಯಾಳಂ ನಾಡು, ನುಡಿ ಸಂಸ್ಕೃತಿಯನ್ನು ಬಹಳ ಅಚ್ಚುಕಟ್ಟಾಗಿ ಮೆರೆಸುತ್ತಿದ್ದಾರೆ. ಅವರ ಬಗ್ಗೆ ನನಗೆ ತುಂಬು ಹೆಮ್ಮೆ ಇದೆ. ಸದ್ಯಕ್ಕಂತೂ ನನಗೆ ನನ್ನ ನಾಡಿನಲ್ಲಿ ಯಾವುದೇ ಎಡರು ತೊಡರುಗಳಿಲ್ಲ, ಜೊತೆಗೆ ಇಲ್ಲಿಯವರೆಗೂ ನನಗಾಗಲಿ, ನನ್ನ ನಾಡಿಗಾಗಲಿ ನೆರೆಹೊರೆಯ ಸಹೋದರಿಯರ ನಾಡಿನ ಜನರಿಂದ ಯಾವ ತೊಂದರೆ ಉಂಟಾಗಿಲ್ಲ!” ಎಂದು ಹೇಳುತ್ತಾ.. ಬಹಳ ಸಂತೋಷದಿಂದ ತನ್ನ ಮಾತನ್ನು ಮುಗಿಸಿತು.

ನಂತರದ ಸರದಿ ಕನ್ನಡ ಭಾಷೆಯದಾಗಿತ್ತು. ಇವರೆಗೂ ಎಲ್ಲ ಭಾಷೆಗಳು ಹಿಂದಿಯಲ್ಲೇ ತಮ್ಮ ಅಭಿಪ್ರಾಯಗಳನ್ನು ಪ್ರಸ್ತಾವಿಸಿ, ಮಂಡಿಸಿದ್ದರಿಂದ ಕನ್ನಡ ಭಾಷೆಯು ಸಹ ಹಿಂದಿಯಲ್ಲೇ ತನ್ನ ಮನದಾಳದ ಮಾತುಗಳನ್ನು ತಿಳಿಸಲು ಮುಂದಾಯಿತು...
ಎಲ್ಲರಿಗೂ ನನ್ನ ನಮಸ್ಕಾರ, ಇಲ್ಲಿಯವರೆಗೂ ನೀವೆಲ್ಲರು ನಿಮ್ಮ, ನಿಮ್ಮ ನಾಡಿನಲ್ಲಿ, ನಿಮ್ಮ ಏಳಿಗೆಗೆ ಹಾಗೂ ಉಳಿವಿಗೆ ಇರುವ ಎಡರು ತೊಡರುಗಳನ್ನು ಮನ ಮುಟ್ಟುವಂತೆ ವಿವರಿಸಿ ಹೇಳಿದ್ದೀರಿ. ನಿಜ ಹೇಳಬೇಕೆಂದರೆ ಇವೊಂದು ಪರಿಸ್ಥಿತಿಯಿಂದ ನಾನು ಸಹ ಹೊರತಲ್ಲ. ನಿಮ್ಮಂತೆಯೇ ಜಾಗತೀಕರಣದ ಫಲವಾಗಿ ನನ್ನ ಉಳಿವು ಸಹ ಅನುಮಾನದ ವಿಷಯವಾಗಿ ಹೋಗಿದೆ.
“ಜಾಗತೀಕರಣ”ಇದು ಒಂದು ನೋವಿನ ವಿಷಯವಾದರೆ. ಇದರ ಜೊತೆಗೆ ನನ್ನವೇ ವೈವಿಧ್ಯಮಯವಾದ ನೋವುಗಳು ಇವೆ. ಅವುಗಳನ್ನು ಈ ಸಮಾರಂಭದಲ್ಲಿ ಹೇಳಲು ನನಗೆ ಹಕ್ಕು ಇದೆ ಎನ್ನುವ ಭಾವನೆ ನನ್ನದು, ಅದನ್ನು ಕೇಳುವ ಸಂಯಾಮ ನಿಮ್ಮಲ್ಲಿ ಇದೆ ಎಂದು ನಾ ಭಾವಿಸಿರುತ್ತೇನೆ,

1) ಈ ವಿಚಾರದಲ್ಲಿ ಮೊದಲನೆಯದಾಗಿ, ನನ್ನ ನಾಡಿನ ನೆರೆಹೊರೆಯಲ್ಲಿ ನಾಲ್ಕಾರು ಸಹೋದರಿಯರ ನಾಡುಗಳು ಇರುವುದು ನಿಮಗೆ ಗೊತ್ತಿದೆ. ಆ ನಾಡುಗಳ ಜನರಿಗಂತೂ ನನ್ನಿಂದ, ನನ್ನ ನಾಡಿನಿಂದ ಆದಷ್ಟು ಬೇಗ ಎಲ್ಲವನ್ನೂ ಕಸಿದುಕೊಳ್ಳುವ ಆಸೆ, ಕೇಂದ್ರ ಸರಕಾರವನ್ನೇ ಅಂಗೈಯಲ್ಲಿ ಇಟ್ಟಿಕೊಂಡಿರುವ ಆ ಜನರಿಗೆ ಹೆಜ್ಜೆ ಹೆಜ್ಜೆಗೂ ನನ್ನ ಏಳಿಗೆಗೆ ಮುಳ್ಳಾಗುವ ಆಸೆ. ಮತ್ತೊಂದೆಡೆ ನನ್ನ ನಾಡಿನ ಅವಿಭಾಜ್ಯ ಅಂಗವಾದ ಬೆಳಗಾವಿಯನ್ನು ಸಂಪೂರ್ಣವಾಗಿ ಕಸಿದುಕೊಳ್ಳುವ ಪ್ರಯತ್ನ. ಒಟ್ಟಾರೆ ನನ್ನ ನಾಡಿನ ಹೊರಗೂ ಎಲ್ಲೆಲ್ಲೂ ನನಗೆ ಉಳಿಗಾಲವೇ ಇಲ್ಲ.

2) ನನ್ನ ಉಳಿವಿಗಾಗಿ ಚಿಂತನೆಗಳನ್ನು ಮಾಡುವವರಿಗೆ, ಕನ್ನಡದ ವಾತಾವರಣದಲ್ಲಿ ಇರೋರಿಗೆ, ಕನ್ನಡಕ್ಕಾಗಿ ಶ್ರಮಿಸುವವರಿಗೆ, ಕೆಲವೊಂದು ಸತ್ಯಾಸತ್ಯಗಳು ತಿಳಿಯಬೇಕಾಗಿದೆ. ಪಾಪ ಅವರು ಕನ್ನಡ ಎಲ್ಲ ಕಡೆ ಬೆಳೆಯುತ್ತಿದೆ ಎಂದು ತಿಳಿದಿದ್ದಾರೆ.. "ನನ್ನ ನಾಡಿನ ರಾಜಧಾನಿ ಬೆಂಗಳೂರು ಒಂದರಲ್ಲೇ ಲಕ್ಷಾಂತರ ಜನ ಕನ್ನಡಿಗರು ಒಳ್ಳೊಳ್ಳೆ ಉನ್ನತ ದರ್ಜೆಯ ಕೆಲಸಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಅವರುಗಳು ಬಹಳ ಸುಖಮಯವಾದಂತಹ ಜೀವನವನ್ನೂ ನಡೆಸುತ್ತಿದ್ದಾರೆ. ಆದರೆ ಅವರುಗಳಲ್ಲಿ ಬಹುಪಾಲು ಮಂದಿ “ಮಾತೃ ಭಾಷೆ” ಎನ್ನುವ ವಿಷಯದಲ್ಲಿ ಎಂತಹ ಹೃದಯ ಶೂನ್ಯರಾಗಿದ್ದಾರೆ. ನನ್ನ ಉಳಿವಿನ ಮಹತ್ವದ ಬಗ್ಗೆ ತಿಳುವಳಿಕೆಯನ್ನು ಮೂಡಿಸುವಂತಹ ಒಂದು ಕಾರ್ಯಕ್ರಮವನ್ನು ಅವರಿಂದ ಏರ್ಪಡಿಸಲು ಆಗಿಲ್ಲ. ಒಮ್ಮೆಯಾದರೂ ಹಳ್ಳಿಗಾಡುಗಳ ಕಡೆ ಹೋಗಿ ಅಲ್ಲಿ ಇಂಗ್ಲೀಷ್ ಭಾಷೆಯ ಬಗ್ಗೆ ಹೆಚ್ಚು, ಹೆಚ್ಚು ಒಲವು ತೋರುತ್ತಿರುವರಿಗೆ ಕನ್ನಡ ಮಾಧ್ಯಮದಲ್ಲಿ ಓದಿ ಏನ್ನೆಲ್ಲ ಸಾಧಿಸಬಹುದೆಂದು ಅರಿವು ಮೂಡಿಸಿ ಬರಲು ಅವರಿಗೆ ಸಮಯವಿಲ್ಲದಂತಾಗಿದೆ".

3) ಅಲ್ಲದೇ ನನ್ನ ನಾಡಿನಲ್ಲಿ ನೂರಾರು ಕನ್ನಡ ಪರ ಸಂಘಟನೆಗಳನ್ನು ಸಂಘಟಿಸಿದ್ದಾರೆ. ಅವುಗಳು ಒಂದಿಷ್ಟು ಗಮನಾರ್ಹ ಕೆಲಸಗಳನ್ನು ಮಾಡಿವೆ. ಆ ವಿಷಯವಾಗಿ ಅವರುಗಳನ್ನು ಮೆಚ್ಚಲೇಬೇಕು. ಆದರೆ ಅವುಗಳಲ್ಲಿ ಹಲವಾರು ಸಂಘಟನೆಗಳ ಸದಸ್ಯರುಗಳ ಮಧ್ಯೆ ವೈಮನಸ್ಸು ಮೂಡಿ, ಕೆಲವೊಂದು ಸಂಘಟನೆಗಳು ಹರಿದು ಚೂರು, ಚೂರಾಗಿ ಅವುಗಳಲ್ಲಿ ಮತ್ತೊಂದೊಂದು ಬಣಗಳು ಹುಟ್ಟಿಕೊಂಡಿವೆ. ಇಂತಹ ಒಂದು ಪರಿಸ್ಥಿತಿ ಬೇಕಿತ್ತೇ? ಒಂದು ನಾಡು, ನುಡಿಯ ಬಗ್ಗೆ ಹೋರಾಡುವವರಿಗೆ ಮನಸ್ಸು, ಮೈಯಿ, ಅವನು, ಇವನು ಎಲ್ಲವೂ ಒಂದೇ ಆಗಿರಬೇಕು. ತನ್ನಲ್ಲೂ, ಅವನಲ್ಲೂ, ಎಲ್ಲದರಲ್ಲೂ ತನ್ನ ಭಾಷೆಯ ತನವನ್ನು ಕಾಣಬೇಕು ಆಗಲೇ ಒಂದು ನಾಡಿನ, ಒಂದು ಭಾಷೆಯ ಪರಿಪೂರ್ಣ ಏಳಿಗೆ ಸಾಧ್ಯ. ಇದನ್ನು ನನಗೆ ಮಾತ್ರ ಅನ್ವಯಿಸಿಕೊಂಡು ಹೇಳುತ್ತಿಲ್ಲ, ನನ್ನಂತೆಯೇ ನೂರಾರು ಸಮಸ್ಯೆಗಳನ್ನು, ಒಳನೋವುಗಳನ್ನು ಎದುರಿಸುತ್ತಿರುವ ಸಹೋದರಿಯ ಭಾಷೆಗಳಾದ ನಿಮ್ಮನ್ನೂ ಅನ್ವಯಿಸಿಕೊಂಡು ಹೇಳುತ್ತಿರುವೆನು. ಯಾಕೆಂದರೆ ನನ್ನ ನಾಡಿನಲ್ಲಿ, ನನ್ನ ಅಭ್ಯುದಯದ ಜೊತೆಗೆ ನೀವು ನಿಮ್ಮ, ನಿಮ್ಮ ನಾಡಿನಲ್ಲಿ ಬೆಳೆಯಬೇಕೆಂಬುದು ನನ್ನ ಮನೋಭಿಲಾಷೆ.

4) ಇನ್ನೂ ನನ್ನ ನಾಡಿನ ಪ್ರಾಧಿಕಾರಗಳು, ಪರಿಷತ್ತುಗಳು ಹಾಗೂ ಸರಕಾರ ಇವರುಗಳು ಕಲಿಯಬೇಕಿರುವುದು ಬಹಳಷ್ಟು ಇದೆ. ಚಿಕ್ಕಪುಟ್ಟ ಮಕ್ಕಳ ತರ ಸಣ್ಣ ಸಣ್ಣದಕ್ಕೂ ಜಗಳ ಕಾಯೋದನ್ನು ಬಿಟ್ಟು, ನನ್ನ ಹಾಗು ನನ್ನ ನಾಡಿನ ಏಳಿಗೆಗೆ ದಾರಿದೀಪಗಳಾಗಬೇಕಿದೆ. ಕನ್ನಡ ನಾಮಾಫಲಕ ಕಡ್ಡಾಯ ಅನ್ನುವ ನಿಯಮವನ್ನು ಇಷ್ಟು ವರುಶವಾದರೂ ಸರಿಯಾಗಿ ಅನುಷ್ಟಾನಕ್ಕೆ ತರಲಾಗಿಲ್ಲ ಅವರಿಗೆ. ಎರಡು ವರುಷಗಳಿಗೊಮ್ಮೆ ನಡೆಸುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೂರಾರು ಎಡರು-ತೊಡರುಗಳು ಜೊತೆಗೆ ಪರ್ಯಾಯ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತಾದ ಕೂಗುಗಳು.

4) ಬೆಳಗಾವಿಯಂತ ನಗರದಲ್ಲಿ ಹತ್ತು ದಿನಗಳ ಕಾಲ ಸರಕಾರದ ಕಾರ್ಯಕಲಾಪಗಳನ್ನು ನಡೆಸುವುದು ಸ್ವಾಗತರ್ಹ ಕ್ರಮ. ಆದರೆ ಹತ್ತು ದಿನದ ಸಮಾವೇಶಕ್ಕೆ ಇಪ್ಪತೈದು ಕೋಟಿ ಖರ್ಚು ಮಾಡುವ ಇವರು. ನಾಡಿನಲ್ಲಿ ಇರುವ ನಿರುದ್ಯೋಗಿ ಪಧವಿದರರಿಗೆ ಮಾಸಿಕವಾಗಿ ಒಂದು ಐದುನೂರು ರೂಪಾಯಿಗಳನ್ನು ಸಹಾಯ ಧನವಾಗಿ ಕೊಡುವ ಯೋಜನೆಯನ್ನು ಅನುಷ್ಟಾನಕ್ಕೆ ತರಲಾಗುದಿಲ್ಲವೇ? ವರುಶಕ್ಕೆ ಇನ್ನೂರರಿಂದ ಮೂನ್ನೂರು ಕೋಟಿ ವೆಚ್ಚವಾಗಬಹುದು ಸರಕಾರದ ಬೊಕ್ಕಸಕ್ಕೆ. ಅಷ್ಟನ್ನೂ ಭರಿಸಲಾಗುವುದಿಲ್ಲವೇ?

ನನ್ನ ನಾಡಿನ ಜನತೆಗೆ, ಪರಿಷತ್ತುಗಳಿಗೆ, ಪ್ರಾಧಿಕಾರಗಳಿಗೆ ಹಾಗೂ ನನ್ನ ನಾಡಿನ ಸರಕಾರಕ್ಕೆ ನನ್ನ ಏಳಿಗೆ ಬಗ್ಗೆ ಸಾಕಷ್ಟು ಕಾಳಜಿ ಬರಲೆಂದು ಭಾರತಮಾತೆಯಲ್ಲಿ ಪ್ರಾರ್ಥಿಸುತ್ತಾ, ಇಷ್ಟು ಹೊತ್ತು ಮಾತನಾಡಲು ಅವಕಾಶ ಕೊಟ್ಟ ಎಲ್ಲ ಸಹೋದರಿಯ ಭಾಷೆಗಳಿಗೆ ವಂದನೆಗಳನ್ನು ಹೇಳುತ್ತಾ... ಕನ್ನಡ ಭಾಷೆಯು ತನ್ನ ಮಾತುಗಳನ್ನು ಮುಗಿಸಿತು!!!!
-ನಿಮ್ಮ ಸುನಿಲ್ ಮಲ್ಲೇನಹಳ್ಳಿ

9 ಕಾಮೆಂಟ್‌ಗಳು:

Nandisha ಹೇಳಿದರು...

ಸುನಿಲ್,
ತುಂಬ ಚೆನ್ನಾಗಿ ಈ ಒಂದು ವರದಿಯನ್ನು ಪ್ರಸ್ತುತ ಪಡಿಸಿದ್ದಿರಿ. ನಿಮಗೆ ದನ್ಯವಾದಗಳು.

ನಂದೀಶ, ಹೆಬ್ಬಕವಾಡಿ ಗ್ರಾಮ, ಮಂಡ್ಯ

ಕವಿತ ಹೇಳಿದರು...

ಇಂತಹ ಸಮ್ಮೇಳನ ನಡೆದಿದೆ ಎಂದೇ ತಿಳಿದಿರಲಿಲ್ಲ. ಮಾಹಿತಿಗಾಗಿ ಧನ್ಯವಾದಗಳು.ಹೇಳಿದ ಎಲ್ಲಾ ವಿಷಯಗಳು ನೂರಕ್ಕೆ ನೂರು ಸತ್ಯ. ಇಂದಾದರೂ ನಮ್ಮ ಜನ ಎಚ್ಚೆದ್ದು ಕನ್ನಡದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು.
ನೀವು ಹೀಗೆ ಬರೆಯುತ್ತಿರಿ ಹಾಗು ನಿದ್ದೆ ಮಾಡುತ್ತಿರುವವರನ್ನು ಎಬ್ಬಿಸಿ.
ಜೈ ಕರ್ನಾಟಕ ಮಾತೆ

Unknown ಹೇಳಿದರು...

ನಂದೀಶ್ ಅವರೇ,
ಪ್ರತಿಕ್ರಿಯಿಸಿದ್ದಕ್ಕೆ ವಂದನೆಗಳು..-ನಿಮ್ಮ ಸುನಿಲ್ ಮಲ್ಲೇನಹಳ್ಳಿ.

ಕವಿತಾ ಅವರೇ,
ಪ್ರತಿಕ್ರಿಯಿಸಿದ್ದಕ್ಕೆ ವಂದನೆಗಳು, ವಾಸ್ತವವಾಗಿ ಜನವರಿ ೨೬ ರ ಗಣರಾಜ್ಯೋತ್ಸವದ ಪ್ರಯುಕ್ತ ಎಲ್ಲ ಪ್ರಾಂತೀಯ ಭಾಷೆಗಳ ಪ್ರಾಮುಖ್ಯತೆಯನ್ನು ಮನಗಂಡು ಬರೆದ ಲೇಖನವಿದು.
-ನಿಮ್ಮ ಸುನಿಲ್ ಮಲ್ಲೇನಹಳ್ಳಿ.

ತೇಜಸ್ವಿನಿ ಹೆಗಡೆ ಹೇಳಿದರು...

ಉತ್ತಮ ವಿಚಾರಗಳನ್ನು ತೆರೆದಿಡಿವ ಲೇಖನ. ಚೆನ್ನಾಗಿ ಮೂಡಿದೆ.

Unknown ಹೇಳಿದರು...

ನಿಮ್ಮ ಲೇಖನ ಸೊಗಸಾಗಿ ಮೊಡಿ ಬಂದಿದೆ ಸುನಿಲ್... ಉಪಯುಕ್ತವಾದ ಮಾಹಿತಿ ನೀಡಿದಕ್ಕೆ ಧನ್ಯವಾದಗಳು...:)

shivu.k ಹೇಳಿದರು...

ಸುನಿಲ್ ಸರ್,

ಕನ್ನಡ ಭಾಷೆಯ ವರದಿ ಸತ್ಯನಿಷ್ಟವಾಗಿದೆ...ಮತ್ತು ಬೇಸರವನ್ನು ತರುತ್ತದೆ.....

ಸಮ್ಮೇಳನದ ಬಗ್ಗೆ ಉಪಯುಕ್ತ ಮಾಹಿತಿ ನೀಡಿದ್ದೀರಿ.....

ಅನಾಮಧೇಯ ಹೇಳಿದರು...

Sunil ravare,

Chennagide ri nimma kavanagalu ie IT Kavanagalu

Anand MB

Shankar Prasad ಶಂಕರ ಪ್ರಸಾದ ಹೇಳಿದರು...

ಭಲೇ, ಭಪ್ಪರೆ...

lakshmi.chinnu ಹೇಳಿದರು...

Hi,
Its nice Article re,Its nice to get an enlightenment about the Current situation of State & Politics...

Hope everything will be fine in all our life......